ಬೆಳಗಾವಿ: ಕಳ್ಳತನದ ಶಂಕೆ; ಸೋದರ ಸಂಬಂಧಿಗೆ ಥಳಿಸಿ ಕೊಲೆ ಮಾಡಿದ ಆರೋಪಿ ಬಂಧನ
ತಮ್ಮ ಮನೆಯಲ್ಲಿ ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಸಂಬಂಧಿಕರೊಬ್ಬರಿಗೆ ಥಳಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಸುತಗಟ್ಟಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಸುತಗಟ್ಟಿ ನಿವಾಸಿ ರಾಯಪ್ಪ ಬಸವನಿ ಮನ್ನಿಕೇರಿ (30) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಶೆಟ್ಟಿಯಪ್ಪ ಕಲ್ಲಪ್ಪ ಮನ್ನಿಕೇರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ತಮ್ಮ ಮನೆಯಲ್ಲಿ ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಸಂಬಂಧಿಕರೊಬ್ಬರಿಗೆ ಥಳಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಸುತಗಟ್ಟಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಸುತಗಟ್ಟಿ ನಿವಾಸಿ ರಾಯಪ್ಪ ಬಸವನಿ ಮನ್ನಿಕೇರಿ (30) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಶೆಟ್ಟಿಯಪ್ಪ ಕಲ್ಲಪ್ಪ ಮನ್ನಿಕೇರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ರಾಯಪ್ಪ ಮದ್ಯವ್ಯಸನಿಯಾಗಿದ್ದು, ಮದ್ಯ ಖರೀದಿಸಲು ಕಳ್ಳತನ ಮಾಡುತ್ತಿದ್ದ. ಈ ವಿಚಾರ ಗ್ರಾಮಸ್ಥರಿಗೆ ತಿಳಿದಿತ್ತು. ಆದರೆ, ಆತನ ವಿರುದ್ಧ ಈವರೆಗೆ ಯಾವುದೇ ಕಳ್ಳತನ ಪ್ರಕರಣ ದಾಖಲಾಗಿಲ್ಲ. ಶೆಟ್ಟಿಯಪ್ಪ ಮನೆಗೆ ಬೀಗ ಹಾಕಿ ಯಾರನ್ನೋ ಭೇಟಿಯಾಗಲೆಂದು ಗ್ರಾಮದಿಂದ ಹೊರಟಿದ್ದರು. ಮೂರು ದಿನಗಳ ನಂತರ ಹಿಂತಿರುಗಿ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಕಂಡು ಬಂತು.
ಕೂಡಲೇ ಅನುಮಾನಗೊಂಡ ಶೆಟ್ಟಿಯಪ್ಪ ರಾಯಪ್ಪನೇ ಕಳ್ಳತನ ಮಾಡಿದ್ದಾನೆ ಎಂದು ಬಲವಾಗಿ ನಂಬಿದ್ದಾರೆೆ. ಕಳ್ಳರು ಮಾಳಿಗೆಯಿಂದ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದರು. ಶೆಟ್ಟಿಯಪ್ಪ ರಾಯಪ್ಪನನ್ನು ಹಿಡಿದು ವಿಚಾರಿಸಿದ್ದಾರೆ. ಇದರಿಂದ ರಾಯಪ್ಪ ಕೆರಳಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಅದು ಹಿಂಸಾಚಾರಕ್ಕೆ ತಿರುಗಿದ್ದು, ರಾಯಪ್ಪ ಕುಡುಗೋಲು ತೆಗೆದುಕೊಂಡು ಶೆಟ್ಟಿಯಪ್ಪನ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ. ಈ ವೇಳೆ ಶೆಟ್ಟಿಯಪ್ಪ ರಾಯಪ್ಪನನ್ನು ಥಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ರಾಯಪ್ಪ ಸಾವಿಗೀಡಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



