BSY ಪುತ್ರ ರಾಘವೇಂದ್ರ ಮತ್ತು ಪತ್ನಿ ಬಳಿ ಇದೆ 73.71 ಕೋಟಿ ರೂ. ಮೌಲ್ಯದ ಆಸ್ತಿ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಾವು ಮತ್ತು ತಮ್ಮ ಪತ್ನಿ 73.71 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಎಂದು ಘೋಷಿಸಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಾವು ಮತ್ತು ತಮ್ಮ ಪತ್ನಿ 73.71 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಎಂದು ಘೋಷಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದು, ತಮ್ಮ ಹೆಸರಿನಲ್ಲಿ 31.09 ಕೋಟಿ ರೂ ಮೌಲ್ಯದ ಚರಾಸ್ಥಿ ಹಾಗೂ ಪತ್ನಿ ತೇಜಸ್ವಿನಿ ಹೆಸರಿನಲ್ಲಿ 2.95 ಕೋಟಿ ರೂ. ಚರಾಸ್ಥಿ ಇರುವುದಾಗಿ ಘೋಷಿಸಿದ್ದಾರೆ.
ಮೂರು ಬಾರಿ ಸಂಸದರಾಗಿರುವ ರಾಘವೇಂದ್ರ ಕೃಷಿ ಮತ್ತು ಕೃಷಿಯೇತರ ಭೂಮಿ, ವಾಣಿಜ್ಯ ಮತ್ತು ವಸತಿ ಕಟ್ಟಡಗಳು ಸೇರಿದಂತೆ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ. ರಾಘವೇಂದ್ರ ಹೆಸರಿನಲ್ಲಿ 24.76 ಕೋಟಿ ರೂ. ಮತ್ತು ಅವರ ಪತ್ನಿ ಹೆಸರಿನಲ್ಲಿ 14.90 ಕೋಟಿ ರೂ. ಸ್ಥಿರಾಸ್ಥಿ ಹೊಂದಿದ್ದಾರೆ.
ಬ್ಯಾಚುಲರ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ (ಬಿಬಿಎಂ) ಪದವೀಧರರಾಗಿರುವ 50 ವರ್ಷದ ರಾಘವೇಂದ್ರ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ರಾಘವೇಂದ್ರ ಅವರು ಒಂದು ಲಕ್ಷ ರೂಪಾಯಿ ಮೌಲ್ಯದ ಅಂಬಾಸಿಡರ್ ಕಾರು, 41.32 ಲಕ್ಷ ರೂಪಾಯಿ ಮೌಲ್ಯದ ಟೊಯೊಟಾ ಫಾರ್ಚೂನರ್ ಕಾರು ಮತ್ತು 2.45 ಲಕ್ಷ ರೂಪಾಯಿ ಮೌಲ್ಯದ ಟ್ರ್ಯಾಕ್ಟರ್ ಹೊಂದಿದ್ದಾರೆ.
ರಾಘವೇಂದ್ರ ಅವರು ತಮ್ಮ ಬಳಿಯಿರುವ ಚಿನ್ನ, ವಜ್ರ, ಬೆಳ್ಳಿ ಮತ್ತು ಅಮೂಲ್ಯ ರತ್ನಗಳು 98.83 ಲಕ್ಷ ರೂ.ಗಳ ಮೌಲ್ಯದ್ದಾಗಿದೆ ಎಂದು ಘೋಷಿಸಿದರೆ, ಅವರ ಪತ್ನಿ ಹೆಸರಿನಲ್ಲಿರುವ ಚಿನ್ನಾಭರಣಗಳ ಮೌಲ್ಯ 1.13 ಕೋಟಿ ರೂಪಾಯಿ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



