ರಾಜ್ಯ

ಪ್ರಹ್ಲಾದ್ ಜೋಶಿ ವಿರುದ್ಧ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಕೋಟ್ಯಾಧಿಪತಿ!

ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು 9.74 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ.

ಪ್ರಹ್ಲಾದ್ ಜೋಶಿ ವಿರುದ್ಧ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಕೋಟ್ಯಾಧಿಪತಿ!
ದಿಂಗಾಲೇಶ್ವರ ಸ್ವಾಮೀಜಿ — TNIE
Published On :

ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು 9.74 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ.

ಧಾರವಾಡ ಲೋಕಸಭೆ ಕ್ಷೇತ್ರದಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್‌ನಲ್ಲಿ ವೀರಶೈವ ಲಿಂಗಾಯತ ಸ್ವಾಮೀಜಿ ಅವರು 1.22 ಕೋಟಿ ಮೌಲ್ಯದ ಚರಾಸ್ಥಿಯನ್ನು ಘೋಷಿಸಿದ್ದಾರೆ.

ಕೃಷಿ, ಕೃಷಿಯೇತರ ಭೂಮಿ, ಶಾಲಾ ಕಟ್ಟಡ ಸೇರಿದಂತೆ ಅವರ ಬಳಿ ಇರುವ ಸ್ಥಿರಾಸ್ತಿ ಮೌಲ್ಯ 8.52 ಕೋಟಿ ರೂಪಾಯಿಯದ್ದಾಗಿದ್ದರೆ ಒಟ್ಟು 39.68 ಲಕ್ಷ ರೂಪಾಯಿ ಸಾಲ ಮಾಡಿದ್ದಾರೆ. 48 ವರ್ಷದ ಸ್ವಾಮೀಜಿ ವಿರುದ್ಧ ಮೂರು ಪ್ರಕರಣಗಳು ಬಾಕಿ ಉಳಿದಿವೆ.

ಸ್ವಾಮೀಜಿ ಬಳಿ ಎರಡು ಟೊಯೊಟಾ ಇನ್ನೋವಾ, ಟ್ರ್ಯಾಕ್ಟರ್ ಮತ್ತು ಶಾಲಾ ಬಸ್ ಇದೆ. ಅಲ್ಲದೆ ಅವರು 4.35 ಲಕ್ಷ ಮೌಲ್ಯದ 7.82 ಕೆಜಿ ಬೆಳ್ಳಿ, 1.17 ಲಕ್ಷ ಮೌಲ್ಯದ 18.9 ಗ್ರಾಂ ಚಿನ್ನವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.