ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವೈದ್ಯರನ್ನು ಡಾ.ಅನಂತ್ ಪ್ರಸಾದ್(38) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದರು.
ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಡಾ.ಅನಂತ್ ಪ್ರಸಾದ್ ಅವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



