ಲೋಕಸಭಾ ಚುನಾವಣೆ 2024: ರಾಜ್ಯದಲ್ಲಿ ಏಪ್ರಿಲ್ 24ರಿಂದ ಚುನಾವಣಾ ಪ್ರಚಾರ, ಚುನಾವಣೋತ್ತರ ಸಮೀಕ್ಷೆ ನಿಷೇಧ
ಕರ್ನಾಟಕದಲ್ಲಿ ಏಪ್ರಿಲ್ 26 ರಂದು ನಡೆಯಲಿರುವ 2ನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ 48 ಗಂಟೆಗಳ ಮೊದಲು ಅಂದರೆ ಏಪ್ರಿಲ್ 24 ರಿಂದ ರಾಜಕೀಯ ಪ್ರಚಾರ ಮತ್ತು ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್ 26 ರಂದು ನಡೆಯಲಿರುವ 2ನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ 48 ಗಂಟೆಗಳ ಮೊದಲು ಅಂದರೆ ಏಪ್ರಿಲ್ 24 ರಿಂದ ರಾಜಕೀಯ ಪ್ರಚಾರ ಮತ್ತು ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ಈ ಆದೇಶದ ಪ್ರಕಾರ, ಪ್ರಚಾರದ ಅವಧಿ ಮುಗಿದ ನಂತರ, ಎಲ್ಲ ರಾಜಕೀಯ ಕಾರ್ಯಕರ್ತರು ಮತ್ತು ಪಕ್ಷದ ಕಾರ್ಯಕರ್ತರು ಮತದಾರರಾಗಿ ನೋಂದಾಯಿಸಿಕೊಂಡಿರದ ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ.
ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ವಸತಿಗೃಹಗಳು ಮತ್ತು ಹೊರಗಿನವರಿಗೆ ವಸತಿ ಕಲ್ಪಿಸುವ ಅತಿಥಿಗೃಹಗಳನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾ ಆಡಳಿತ ಮತ್ತು ಪೊಲೀಸರು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ.
ಮತಕ್ಷೇತ್ರದ ಗಡಿಯಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಿ ಕ್ಷೇತ್ರದ ಹೊರಗಿನಿಂದ ಬರುವ ವಾಹನಗಳ ಓಡಾಟವನ್ನು ಪತ್ತೆ ಹಚ್ಚಲಾಗುವುದು. ವ್ಯಕ್ತಿಯು ಆ ಕ್ಷೇತ್ರದ ಮತದಾರರೇ ಅಥವಾ ಅಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿದ್ದಲ್ಲಿ ಗುರುತಿನ ಚೀಟಿಗಳನ್ನು ಸಹ ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


