ನೇಹಾ ಹತ್ಯೆ: ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ; ಸುಮ್ಮನೆ ಬಿಡಬೇಡಿ; ಆರೋಪಿ ತಂದೆ ಕಣ್ಣೀರು
ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಪುತ್ರಿ ನೇಹಾ ಹತ್ಯೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಆರೋಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ಮಧ್ಯೆ ನನ್ನ ಮಗ ಮಾಡಿರುವುದು ಕ್ಷಮಿಸಲಾರದಂತ ಹೀನ ಕೃತ್ಯ ಆತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆರೋಪಿ ಫಯಾಜ್ ತಂದೆ ಕಣ್ಣೀರು ಹಾಕಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಪುತ್ರಿ ನೇಹಾ ಹತ್ಯೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಆರೋಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ಮಧ್ಯೆ ನನ್ನ ಮಗ ಮಾಡಿರುವುದು ಕ್ಷಮಿಸಲಾರದಂತ ಹೀನ ಕೃತ್ಯ ಆತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆರೋಪಿ ಫಯಾಜ್ ತಂದೆ ಕಣ್ಣೀರು ಹಾಕಿದ್ದಾರೆ.
ನನ್ನ ಮಗ ಮಾಡಿದ ತಪ್ಪಿಗೆ ನಾನು ಮುನವಳ್ಳಿ ಹಾಗೂ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ ಎಂದು ಬಾಬಾ ಸಾಹೇಬ್ ಸುಬಾನಿ ಹೇಳಿದ್ದಾರೆ. ದಯವಿಟ್ಟು ಯಾರೇ ಆಗಲಿ ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಬೇಡಿ ಎಂದು ಕಣ್ಣೀರು ಹಾಕಿದ್ದಾರೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ. ಆದರೆ ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ನನ್ನ ಮಗನನ್ನು ಭಾರತೀಯ ಸೇನೆಗೆ ಸೇರಿಬೇಕು ಎಂಬ ಆಸೆ ನನ್ನದಾಗಿತ್ತು. ಆದರೆ ಇಂದು ಆತ ಕ್ಷಮಿಸಲಾರದ ತಪ್ಪು ಮಾಡಿದ್ದಾನೆ. ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವೀಕರಿಸುತ್ತೇನೆ. ಮುಂದೆ ಯಾವ ಹೆಣ್ಮಕ್ಕಳ ಮೇಲೆ ಯಾರೂ ಕೈ ಮಾಡಬಾರದು. ಇವನಿಗೆ ಕೊಡುವ ಶಿಕ್ಷೆಯಿಂದ ಅಂತಹ ಭಯ ಜನರಲ್ಲಿ ಮೂಡಬೇಕು. ಆ ರೀತಿಯ ಶಿಕ್ಷೆಯನ್ನು ನೀಡಲಿ ಎಂದು ಹೇಳುತ್ತಾ ನೇಹಾ ತಂದೆ ಹಾಗೂ ರಾಜ್ಯದ ಜನರ ಬಳಿ ಕ್ಷಮೆಯಾಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



