ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ: ಇಜಾರಿ ಘೋಷಣೆ
ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ. ಯಾರ ಮನೆಯಲ್ಲಿ ಹೆಣ್ಮಕ್ಕಳು ಇದ್ದಾರೋ ಅವರೆಲ್ಲಾ ಬಂದ್ ಬೆಂಬಲಿಸಿ ಎಂದು ಇಜಾರಿ ಹೇಳಿದ್ದು ನಾಳೆ ಬಂದ್ ಅಂಗವಾಗಿ ಬಿವಿಬಿ ಕಾಲೇಜಿನಿಂದ ಮೆರವಣಿಗೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ನೇಹಾ ಹತ್ಯೆ ಖಂಡಿಸಿ ಇಂದು ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಮಾತನಾಡಿದ ಎಬಿವಿಪಿ ಕಾರ್ಯದರ್ಶಿ ಸಚಿನ್, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪೂರ್ವ ನಿಯೋಜಿತ ಕೃತ್ಯ. ಮೇಲ್ನೋಟಕ್ಕೆ ಇದೊಂದು ಲವ್ ಜಿಹಾದ್ ಪ್ರಕರಣ ಎನಿಸುತ್ತಿದೆ. ಕಾಲೇಜು ಕ್ಯಾಂಪಸ್ನೊಳಗೆ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮುಖ್ಯಮಂತ್ರಿಗಳು, ಗೃಹಮಂತ್ರಿ ಅದು ಹೇಗೆ ಆಕಸ್ಮಿಕ ಘಟನೆ ಅಂತಿದಾರೋ ಗೊತ್ತಿಲ್ಲ. ಅವರ ಹೇಳಿಕೆ ನಮಗೆ ಅಚ್ಚರಿ ಮೂಡಿಸಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



