ನೀತಿ ಸಂಹಿತೆ ಉಲ್ಲಂಘಿಸಿದ ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು: ಚುನಾವಣಾ ಆಯೋಗ
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಬೆಂಗಳೂರು: ಹೌಸಿಂಗ್ ಸೊಸೈಟಿಯ ನಿವಾಸಿಗಳ ಮತಯಾಚನೆ ವೇಳೆ ಕಾವೇರಿ ನೀರು ಸರಬರಾಜು ಮಾಡುವ ಭರವಸೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹೌಸಿಂಗ್ ಸೊಸೈಟಿಯ ನಿವಾಸಿಗಳ ಬಳಿ ಮತ ಯಾಚಿಸಿದ ವಿಡಿಯೋವನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ಡಿಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡು, ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು.
ಆರ್‌ಆರ್ ನಗರದಲ್ಲಿರುವ ಅಪಾರ್ಟ್‌ಮೆಂಟ್ ನಿವಾಸಿಗಳನ್ನು ಉದ್ದೇಶಿ ಮಾತನಾಡುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್‌ಎಸ್‌ಟಿ (ಫ್ಲೈಯಿಂಗ್ ಸ್ಕ್ವಾಡ್ ಟೀಮ್ಸ್) ಎಫ್‌ಐಆರ್ ದಾಖಲಿಸಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
ಚುನಾವಣೆಯಲ್ಲಿ ಲಂಚ ಮತ್ತು ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



