ಗೋ ಗ್ರೀನ್ ಅಭಿಯಾನ: ನಗರದ ಕೆರೆಗಳಿಗೆ ಮರುಜೀವ ನೀಡಿ, ಕನ್ನಡಿಗರ ಮನಗೆದ್ದ RCB!
ಐಪಿಎಲ್ ಆಟದಲ್ಲಿ ಮುಗ್ಗರಿಸಿದ್ದರೂ ಸಾಮಾಜಿಕ ಕಾರ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಕನ್ನಡಿಗರ ಮನಗೆದ್ದಿದೆ.

ಬೆಂಗಳೂರು: ಐಪಿಎಲ್ ಆಟದಲ್ಲಿ ಮುಗ್ಗರಿಸಿದ್ದರೂ ಸಾಮಾಜಿಕ ಕಾರ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಕನ್ನಡಿಗರ ಮನಗೆದ್ದಿದೆ.
ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಆರ್ಸಿಬಿ ಪೂರ್ಣಗೊಳಿಸಿದೆ. ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆಯಲ್ಲಿ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸಿದೆ. ಇಂಡಿಯಾ ಕೇರ್ಸ್ ಫೌಂಡೇಶನ್ ಈ ಕುರಿತು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವತ್ತ ಗಮನ ಹರಿಸಿ ಆರ್ಸಿಬಿ 2023ರ ಅಕ್ಟೋಬರ್ನಲ್ಲಿ ಇಎಸ್ಜಿ ಬದ್ಧತೆಯ ಭಾಗವಾಗಿ ಕೆರೆಗಳ ಸುಧಾರಣಾ ಕಾರ್ಯ ಯೋಜನೆಯನ್ನು ಕೈಗೆತ್ತಿಕೊಂಡಿತ್ತು.
1000 ರಿಂದ 1500 ಅಡಿಗಳವರೆಗಿನ ಬೋರ್ವೆಲ್ ಆಳವನ್ನು ಹೊಂದಿರುವ ಈ ಕೆರೆಗಳನ್ನು ಹೆಚ್ಚು ನೀರಿನ ಒತ್ತಡದ ಪ್ರದೇಶಗಳಾಗಿ ಆಯ್ಕೆ ಮಾಡಲಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ ಮತ್ತು ಸಂಪೂರ್ಣವಾಗಿ ಅಂತರ್ಜಲ ಮತ್ತು ಮೇಲ್ಮೈ ನೀರಿನ ಮೇಲೆ ಅವಲಂಬಿತವಾಗಿವೆ.
ವರದಿಯ ಪ್ರಕಾರ, ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ 1.20 ಲಕ್ಷ ಟನ್ ಹೂಳು ಮತ್ತು ಮರಳನ್ನು ತೆಗೆಯಲಾಗಿದ್ದು, ಇದನ್ನು ಕೆರೆಗಳಿಗೆ ಅಡ್ಡಲಾಗಿ ಕಟ್ಟೆಗಳು ಮತ್ತು ಮಾರ್ಗಗಳನ್ನು ನಿರ್ಮಿಸಲು ಬಳಸಲಾಗಿದೆ ಮತ್ತು 52 ರೈತರು ಮಣ್ಣನ್ನು ತಮ್ಮ ಹೊಲಗಳಿಗೆ ಮೇಲ್ಮಣ್ಣು ಆಗಿ ಬಳಸಿದ್ದಾರೆ. ಇದರಿಂದಾಗಿ ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ 17 ಎಕರೆಗಳಷ್ಟು ಹೆಚ್ಚಾಗಿದೆ.
ಏತನ್ಮಧ್ಯೆ, ಜೀವವೈವಿಧ್ಯವನ್ನು ಸುಧಾರಿಸುವ ಉದ್ದೇಶದಿಂದ ಕಣ್ಣೂರು ಕೆರೆಯ ಸುತ್ತಲೂ ಔಷಧೀಯ ಸಸ್ಯಗಳ ಉದ್ಯಾನವನ, ಬಿದಿರಿನ ಉದ್ಯಾನವನ ಮತ್ತು ಚಿಟ್ಟೆ ಪಾರ್ಕ್ಗಳನ್ನು ನಿರ್ಮಿಸಲಾಗಿದೆ. ಆರ್ಸಿಬಿಯ ಈ ಕೆಲಸಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



