ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ: ಗೃಹ ಸಚಿವ
ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಹೇಳಿಕೆಯಿಂದ ಅವರ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ. ಆದರೆ, ಸತ್ಯವನ್ನು ಯಾವತ್ತೂ ಮುಚ್ಚಿಡಲು ಸಾಧ್ಯವಿಲ್ಲ. ತನಿಖೆ ಬಳಿಕ ಎಲ್ಲಾ ವಿಷಯ ಹೊರಬರುತ್ತೆ. ನಮಗೆ ಬಂದಿರುವ ವರದಿ ಪ್ರಕಾರ ಮಾತಾಡಿದ್ದೇವೆ ಎಂದು ಹೇಳಿದರು.
ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ವಿಚಾರವಾಗಿ ಮಾತನಾಡಿ, ಅವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಮಗೆ ಜವಾಬ್ದಾರಿ ಇದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು. ತನಿಖೆಯಲ್ಲಿ ಎಲ್ಲಾ ಸತ್ಯ ಹೊರಬರಲಿದೆ ಎಂದು ತಿಳಿಸಿದರು.
ರಾಜ್ಯಕ್ಕೆ ಮೋದಿ ಭೇಟಿ ಕುರಿತು ಮಾತನಾಡಿ, ಮೋದಿ ಅವರು ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಮುಂದೇನು ಕೂಡ ಬರುತ್ತಾರೆ. ನಾವು ಅನೇಕ ಪ್ರಶ್ನೆ ಕೇಳಿದ್ಧೇವೆ. ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದೀರಾ ಎಂದು ಕೇಳಿದ್ದೇವೆ. ಜಿಎಸ್ ಟಿ ಹಂಚಿಕೆ ಎಷ್ಟು ಕೊಟ್ಟಿದ್ದೀರಿ? ಭೀಕರ ಬರಗಾಲ ಇತ್ತು, ವಿಶೇಷ ಅನುದಾನ ಕೊಟ್ಟಿಲ್ಲ. 18 ಸಾವಿರ ಕೋಟಿ ಬರ ಪರಿಹಾರ ಪ್ರಸ್ತಾವನೆ ಇಡಲಾಗಿತ್ತು, ಅದನ್ನು ಕೊಟ್ಟಿಲ್ಲ. ಯಾವುದೇ ಹೊಸ ಯೋಜನೆ ಕೊಟ್ಟಿಲ್ಲ. ಭದ್ರ ಮೇಲ್ಡಂಡೆ ಯೋಜನೆಗೆ ಯಾವುದೇ ಸಹಕಾರ ಕೊಟ್ಟಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



