ನೇಹಾ ಹತ್ಯೆ ಪ್ರಕರಣ: ಲವ್ ಜಿಹಾದ್ ಯತ್ನ ನಡೆದಿದೆ, NIA ತನಿಖೆಗೆ ವಹಿಸಿ: ಸರ್ಕಾರಕ್ಕೆ ಶೆಟ್ಟರ್ ಆಗ್ರಹ
ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆ ಮುಂದುವರೆದಿವೆ.

ಮುನವಳ್ಳಿ, (ಬೆಳಗಾವಿ): ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆ ಮುಂದುವರೆದಿವೆ.
ಬೆಳಗಾವಿ ಜಿಲ್ಲೆಯ ಮುನವಳ್ಳಿಯಲ್ಲಿ ಬೆಳಗಾವಿ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ನೇಹಾ ಹತ್ಯೆ ಪ್ರಕರಣ ಸಂಬಂಧ ತೀವ್ರವಾಗಿ ಕಿಡಿಕಾರಿದರು.
ಹುಬ್ಬಳ್ಳಿ ಪ್ರಕರಣದಲ್ಲಿ ‘ಲವ್ ಜಿಹಾದ್’ ಯತ್ನ ನಡೆದಿದ್ದು, ಘಟನೆಗೆ ಕಾಂಗ್ರೆಸ್ ಸರಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಆರೋಪಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಶೆಟ್ಟರ್, ನೇಹಾ ಲವ್ ಜಿಹಾದ್‌ಗೆ ಬಲಿಯಾಗಿದ್ದಾಳೆ, ಹಲವು ಪ್ರಕರಣಗಳು ಬಯಲಿಗೆ ಬರುತ್ತಿಲ್ಲ, ಆದರೆ, ನೇಹಾ ಕೊಲೆ ಅದನ್ನು ಬಯಲು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಶಿವಕುಮಾರ್ ಹತ್ಯೆಯ ಹಿಂದೆ ವೈಯಕ್ತಿಕ ಕಾರಣಗಳನ್ನು ಹೇಳುತ್ತಿದ್ದಾರೆಂದು ಕಿಡಿಕಾರಿದರು. ಅಲ್ಲದೆ, ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಓಲೈಕೆ ಮತ್ತು ವೋಟ್ ಬ್ಯಾಂಕ್ ರಾಜಕಾರಣದಿಂದ ತನ್ನದೇ ಕಾರ್ಪೊರೇಟರ್‌ನೊಂದಿಗೆ ನಿಲ್ಲಲು ಸಾಧ್ಯವಾಗದಿರುವುದು ದುರದೃಷ್ಟಕರ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



