ರಾಜ್ಯ

ಮೋದಿ ಪ್ರಚಾರದ ವೇಳೆ ಭದ್ರತಾ ಲೋಪ?: ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ನಲಪಾಡ್ ವಶಕ್ಕೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಾವಲು ವಾಹನಗಳು ಸಂಚರಿಸಬೇಕಿದ್ದ ಮಾರ್ಗದ ಸಮೀಪ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆಯಿತು.

ಮೋದಿ ಪ್ರಚಾರದ ವೇಳೆ ಭದ್ರತಾ ಲೋಪ?: ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ನಲಪಾಡ್ ವಶಕ್ಕೆ
ನಲಪಾಡ್ ವಶಕ್ಕೆ
Published On :

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಾವಲು ವಾಹನಗಳು ಸಂಚರಿಸಬೇಕಿದ್ದ ಮಾರ್ಗದ ಸಮೀಪ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆಯಿತು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶನಿವಾರ ಅರಮನೆ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ಹಮ್ಮಿಕೊಂಡಿತ್ತು. ಈ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು.

ಪ್ರಧಾನಿ ಅವರ ಬೆಂಗಾವಲು ವಾಹನಗಳು ಸಂಚರಿಸಬೇರಿದ್ದ ಮಾರ್ಗದ ಸಮೀಪದ ಮೇಖ್ರಿ ವೃತ್ತದಲ್ಲಿ ನಲಪಾಡ್ ಖಾಲಿ ಚೊಂಬು ಪ್ರದರ್ಶಿಸಲು ಮುಂಜಾಗಿದ್ದರು. ಈ ವೇಳೆ ಅಲ್ಲೇ ಇದ್ದ ಪೊಲೀಸರು ನಲಪಾರ್ ಸೇರಿ ಇಬ್ಬರನ್ನು ವಶಕ್ಕೆ ಪಡೆದು ಸದಾಶಿವನಗರ ಠಾಣೆಗೆ ಕರೆದೊಯ್ದರು.

ಮೋದಿಯವರ ಬೆಂಗಾವಲು ಪಡೆ ಅರಮನೆ ಮೈದಾನದಿಂದ ಹೊರಡುವ ಕೆಲವೇ ನಿಮಿಷಗಳ ಮೊದಲು ನಲಪಾಡ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ಇದನ್ನು ಭದ್ರತಾ ಉಲ್ಲಂಘನೆ ಎಂದು ಕರೆಯಲಾಗುವುದಿಲ್ಲ ”ಎಂದು ಡಿಸಿಪಿ (ಕೇಂದ್ರ) ಬಿಕೆ ಶೇಖರ್ ತಿಳಿಸಿದ್ದಾರೆ.

ಇಬ್ಬರು ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳು ಮತ್ತು ನಾಲ್ವರು ಡಿಸಿಪಿಗಳು ಸೇರಿದಂತೆ ಒಟ್ಟು 2,000 ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ರ‍್ಯಾಲಿಗೆ ನಿಯೋಜಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.