ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿದ ಮುಸ್ಲಿಮರು; ಸಂತ್ರಸ್ತ ಹಿಂದೂ ಕುಟುಂಬ ಬೆಂಬಲಿಸಿ ಅರ್ಧ ದಿನ ಬಂದ್
ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು.

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು ಮತ್ತು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಸಾರ್ವಜನಿಕವಾಗಿ ಬೆಂಬಲ ನೀಡಿದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಬೆಚ್ಚಿಬೀಳಿಸಿದ ಹೀನ ಕೃತ್ಯವನ್ನು ಖಂಡಿಸಿ ಅರ್ಧ ದಿನ ಬಂದ್ ಆಚರಿಸಿದರು ಮತ್ತು ಹಿರೇಮಠ ಅವರ ಕುಟುಂಬದ ಜೊತೆ ತಾವೂ ಇರುವುದಾಗಿ ಒಗ್ಗಟ್ಟು ಪ್ರದರ್ಶಿಸಿದರು.
‘ನೇಹಾ ಹಿರೇಮಠ್ಗೆ ನ್ಯಾಯ ಸಿಗಬೇಕು’ ಎಂದು ಒತ್ತಾಯಿಸಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂದೆ ಪೋಸ್ಟರ್ ಹಾಕಿದ್ದರು.
ಅಂಜುಮನ್-ಎ-ಇಸ್ಲಾಂನ ಧಾರವಾಡ ಘಟಕದ ಬ್ಯಾನರ್ ಅಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು, ಬಾಲಕ-ಬಾಲಕಿಯರು ನಗರದಲ್ಲಿ ನೇಹಾ ಹತ್ಯೆ ಖಂಡಿಸಿ ಫಲಕಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು ಮತ್ತು "ಹೆಣ್ಣುಮಕ್ಕಳನ್ನ ಗೌರವಿಸಬೇಕು ಹಾಗೂ ರಕ್ಷಿಸಬೇಕು" ಎಂದು ಒತ್ತಾಯಿಸಿದರು.
ನೇಹಾ ಹತ್ಯೆ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರಿಂದ, ನಗರದಲ್ಲಿ ಮೀಸಲು ಪೊಲೀಸ್ ಪಡೆ ನಿಯೋಜನೆಯೊಂದಿಗೆ ಭಾರಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ (23) ಅವರನ್ನು ಗುರುವಾರ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದನು. ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಫಯಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



