10 ಹಳದಿ ಅನಕೊಂಡ ಹಾವುಗಳ ಕಳ್ಳಸಾಗಣೆಗೆ ಯತ್ನ; ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ವಶಕ್ಕೆ
10 ಹಳದಿ ಅನಕೊಂಡ ಹಾವುಗಳೊಂದಿಗೆ ಪ್ರಯಾಣಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: 10 ಹಳದಿ ಅನಕೊಂಡ ಹಾವುಗಳೊಂದಿಗೆ ಪ್ರಯಾಣಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಎಂದು ತಿಳಿದುಬಂದಿದೆ. ಚೆಕ್ ಇನ್ ವೇಳೆ ಈತ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿರುವುದು ಪತ್ತೆಯಾಗಿದೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸುವ ಪ್ರಯಾಣಿಕರ ಚೆಕ್-ಇನ್ ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ 10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡುವ ಪ್ರಯತ್ನವನ್ನು ತಡೆದಿದ್ದೇವೆ ಎಂದು ಹೇಳಿದ್ದಾರೆ.
"ಪ್ರಯಾಣಿಕನನ್ನು ಬಂಧಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ವನ್ಯಜೀವಿ ಕಳ್ಳಸಾಗಣೆಯನ್ನು ಸಹಿಸಲಾಗುವುದಿಲ್ಲ" ಎಂದು ಕಸ್ಟಮ್ಸ್ ಅಧಿಕಾರಿಗಳು ಟ್ವೀಟ್ ಮಾಡಿದ್ದಾರೆ. ಭಾರತೀಯ ಕಾನೂನುಗಳ ಪ್ರಕಾರ ವನ್ಯಜೀವಿ ವ್ಯಾಪಾರ ಮಾಡುವುದು ಕಾನೂನುಬಾಹಿರವಾಗಿದೆ ಮತ್ತು ಕಸ್ಟಮ್ಸ್ ಕಾಯ್ದೆ, 1962 ವನ್ಯಜೀವಿ ಕಳ್ಳಸಾಗಣೆಯನ್ನು ಎದುರಿಸಲು ಹಲವು ಸೆಕ್ಷನ್ ಗಳನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



