ರಾಯಚೂರು: ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವು

ರಾಯಚೂರು: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28ವ), ಮಹೇಶ್ (24ವ), ಉದಯ್ ಕುಮಾರ್ (28ವ) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು.
ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



