ರಾಜ್ಯ

ಆರೋಗ್ಯದಲ್ಲಿ ಏರುಪೇರು: ಮಾಜಿ ಸಿಎಂ ಎಸ್ಎಂ ಕೃಷ್ಣ ಆಸ್ಪತ್ರೆಗೆ ದಾಖಲು!

ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಆರೋಗ್ಯದಲ್ಲಿ ಏರುಪೇರು: ಮಾಜಿ ಸಿಎಂ ಎಸ್ಎಂ ಕೃಷ್ಣ ಆಸ್ಪತ್ರೆಗೆ ದಾಖಲು!
ಎಸ್ಎಂ ಕೃಷ್ಣ — ಎಸ್.ಎಂ.ಕೃಷ್ಣ
Published On :

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಎಸ್.ಎಂ.ಕೃಷ್ಣ ಅವರು ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವರದಿಗಳು ತಿಳಿಸಿವೆ. ಆದರೆ ಇನ್ನು ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಇರಲಿದ್ದು ಬಳಿಕ ಡಿಶ್ಚಾರ್ಜ್ ಆಗಲಿದ್ದಾರೆನ್ನಲಾಗುತ್ತಿದೆ.

ಇತ್ತೀಚೆಗೆ ತೀವ್ರ ಜ್ವರದಿಂದ ಬಳಲಿದ್ದ ಎಸ್​ಎಂ ಕೃಷ್ಣ ಅವರು ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದರು. ಇದೀಗ ಮತ್ತೆ ತೀವ್ರ ಶೀತ ಮತ್ತು ಜ್ವರದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.