BJP ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ಹಣ ಪತ್ತೆ!
ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಐಟಿ ಶಾಕ್ ನೀಡಿದೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಐಟಿ ಶಾಕ್ ನೀಡಿದ್ದು ಸುಧಾಕರ್ ಆಪ್ತ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ.
ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. 10 ಮಂದಿ ಐಟಿ ಅಧಿಕಾರಿಗಳ ತಂಡ ಮನೆಯ ಇಂಚಿಂಚು ಪರಿಶೀಲನೆ ನಡೆಸಿದ್ದು ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿದೆ.
ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ. ನೋಟು ಎಣಿಕೆ ವೇಳೆ ಮನೆಯಲ್ಲಿ ದಾಖಲೆ ಇಲ್ಲದೆ ಬರೋಬ್ಬರಿ 4 ಕೋಟಿ 80 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಗೋವಿಂದಪ್ಪ ನಿವಾಸಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ದೌಡಾಯಿಸಿ ಮಾಹಿತಿ ಪಡೆದುಕೊಂಡರು. ಅಲ್ಲದೆ ಭದ್ರತೆಯನ್ನು ಹೆಚ್ಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



