ರಾಜ್ಯ

ಪ್ರಚೋದನೆಗೆ ಒಳಗಾಗದೆ, ಸ್ವಇಚ್ಛೆಯಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್

ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಮತದಾರರು ಯಾವುದೇ ಪ್ರಚೋದನೆಗೆ ಒಳಗಾಗದೆ ಸ್ವಂತ ವಿವೇಚನೆಯಿಂದ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಕರೆ ನೀಡಿದರು.

ಪ್ರಚೋದನೆಗೆ ಒಳಗಾಗದೆ, ಸ್ವಇಚ್ಛೆಯಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Published On :

ಬೆಂಗಳೂರು: ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಮತದಾರರು ಯಾವುದೇ ಪ್ರಚೋದನೆಗೆ ಒಳಗಾಗದೆ ಸ್ವಂತ ವಿವೇಚನೆಯಿಂದ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಕರೆ ನೀಡಿದರು.

ಮಹದೇವಪುರದ ಗುಂಜೂರು ಬಳಿಯ ಕೃಪಾನಿಧಿ ಸಮೂಹ ಸಂಸ್ಥೆಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಮಾಡಬೇಕು, ಆದರೆ, ಗೊಂದಲವಿದೆ ಎನ್ನುವವರು ವೋಟರ್ ಹೆಲ್ಪ್ ಲೈನ್ ಸಾಫ್ಟ್‌ವೇರ್'ನ್ನು ಮೊದಲು ಡೌನ್‌ಲೋಡ್ ಮಾಡಿಕೊಳ್ಳಬೇಕು.

ನಿಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಸಾಫ್ಟ್‌ವೇರ್‌ನಲ್ಲಿ ನಮೂದಿಸಿದರೆ, ನಿಮಗೆ ಎಲ್ಲಾ ಮಾಹಿತಿ ಲಭ್ಯವಾಗುತ್ತದೆ. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದೂ ನೀವು ಮತದಾನ ಮಾಡದೇ ಇರುವುದು ತಪ್ಪಾಗುತ್ತದೆ. ಹೀಗಾಗಿ ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಮತದಾನ ಮಾಡಿ. ನಿಮ್ಮ ಸ್ವಂತ ವಿವೇಚನೆಯಿಂದ ಮತದಾನ ಮಾಡಿ ಎಂದು ಹೇಳಿದರು.

ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾ ಮತ್ತು ಪೊಲೀಸ್ ಅಧಿಕಾರಿಗಳು ಎಲ್ಲಾ ಪ್ರದೇಶಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುತ್ತಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.