ಮನೆಯಲ್ಲೇ ಕುಳಿತುಕೊಳ್ಳಬೇಡಿ, ನಿಮ್ಮ ನಾಯಕನನ್ನು ಆಯ್ಕೆ ಮಾಡಿ: ಮತದಾರರಿಗೆ ಸುಧಾ ಮೂರ್ತಿ ಕರೆ
ನಾನು ಎಲ್ಲರಿಗೂ ಹೇಳಲು ಬಯಸುವುದೆನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ.

ಬೆಂಗಳೂರು: ನಾನು ಎಲ್ಲರಿಗೂ ಹೇಳಲು ಬಯಸುವುದೆನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಮನವಿ ಮಾಡಿದ್ದಾರೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.
ಇನ್ಫೊಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ, ಲೇಖಕಿ ಸುಧಾಮೂರ್ತಿ ಅವರು ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರವಾಸಿಗಳು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರತಿ ಐದು ವರ್ಷಗಳಿಗೊಮ್ಮೆ ನಮ್ಮ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸುವ ಅವಕಾಶವೇ ಮತದಾನ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಇದು ಸುಸಂದರ್ಭ. ಇಂದು ಬಹಳ ಸಂತೋಷದ ದಿನ. ನಾವೆಲ್ಲರೂ ನಮ್ಮ ಹಕ್ಕನ್ನು ಚಲಾಯಿಸಲು ಉತ್ಸಾಹದಿಂದ ಇರಬೇಕಾದ ದಿನ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


