ಲೋಕಸಭಾ ಚುನಾವಣೆ 2024: ಭಾರತದ ಪ್ರಜಾಪ್ರಭುತ್ವ ಹಬ್ಬವನ್ನು ವಿಶೇಷವಾಗಿ ಸಂಭ್ರಮಿಸಿದ ಗೂಗಲ್
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಈ ನಡುವಲ್ಲೇ ಜಾಗತಿಕ ದೈತ್ಯ ಸರ್ಚ್ ಎಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಈ ನಡುವಲ್ಲೇ ಜಾಗತಿಕ ದೈತ್ಯ ಸರ್ಚ್ ಎಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.
ಗೂಗಲ್ ವಿಶೇಷ ಸಂದರ್ಭಗಳಲ್ಲಿ ತನ್ನ ಡೂಡಲ್ ಅನ್ನು ಬದಲಾಯಿಸುತ್ತದೆ. ಇಂದು ಕೂಡ ತನ್ನ ಡೂಡಲ್ ಅನ್ನು ಬದಲಾಯಿಸಿದ್ದು, ಶಾಯಿ ಹಚ್ಚಿದ ತೋರು ಬೆರಳಿನ ಚಿತ್ರವನ್ನು ಹಂಚಿಕೊಂಡಿದೆ. ಇದು ಭಾರತೀಯ ಚುನಾವಣೆಗಳ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಸಮಾನಾರ್ಥಕ ಸಂಕೇತವಾಗಿದೆ.
ದೇಶದ 13 ರಾಜ್ಯಗಳಲ್ಲಿನ 88 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕರ್ನಾಟಕದ 14 ಮತ್ತು ಕೇರಳದ ಎಲ್ಲ 20 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಜೊತೆಗೆ, ರಾಜಸ್ಥಾನದ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದಲ್ಲಿ 7, ಬಿಹಾರ ಮತ್ತು ಅಸ್ಸಾಂನಲ್ಲಿ ತಲಾ 5, ಛತ್ತೀಸಗಡ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3 ಹಾಗೂ ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಚುನಾವಣೆಯ ಮತದಾನ ಪ್ರಕ್ರಿಯೆ ಜೂನ್ 1 ರಂದು ಮುಕ್ತಾಯಗೊಳ್ಳಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



