10 ವರ್ಷ ಬಿಜೆಪಿಗೆ ಅಧಿಕಾರ ಕೊಟ್ಟಿದ್ದೀರಿ, ಇದೀಗ ಬದಲಾವಣೆಯತ್ತ ಮುಖ ಮಾಡಿ: ಜನತೆಗೆ ಡಿಕೆ.ಶಿವಕುಮಾರ್
10 ವರ್ಷ ಕೊಟ್ಟಿದ್ದೀರಿ. ಇದೀಗೆ ಬದಲಾವಣೆಯತ್ತ ಮುಖ ಮಾಡಿ ಎಂದು ಮತದಾರರಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: 10 ವರ್ಷ ಕೊಟ್ಟಿದ್ದೀರಿ. ಇದೀಗೆ ಬದಲಾವಣೆಯತ್ತ ಮುಖ ಮಾಡಿ ಎಂದು ಮತದಾರರಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ. ರಾಜ್ಯದಲ್ಲಿ ಅತೀದೊಡ್ಡ ಫಲಿತಾಂಶ ಬರುವ ವಿಶ್ವಾಸವಿದೆ. ವಿಧಾನಸಭಾ ಚುನಾವಣೆಯಲ್ಲಿ ನುಡಿದಂತೆ ನಡೆದಿದ್ದೇವೆ. ಅದರಿಂದ ಜನರು ಸಂತಸಗೊಂಡಿದ್ದಾರೆ. ಮಹಿಳೆಯರು ಪಕ್ಷ ಎಂಬ ರೇಖೆ ದಾಟಿ ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆಂದು ಹೇಳಿದರು.
ಕಾಂಗ್ರೆಸ್ ಪಕ್ಷ ಅತ್ಯಂತ ಉತ್ತಮ ಪ್ರಣಾಳಿಕೆಯನ್ನು ನೀಡಿದ್ದು, ಮೊದಲ ಬಾರಿಗೆ ಮತ ಹಾಕುತ್ತಿರುವ ಯುವಕರು ಬದಲಾವಣೆಯತ್ತ ಮುಖ ಮಾಡಬೇಕು. 10 ವರ್ಷ ಬಿಜೆಪಿಗೆ ಅಧಿಕಾರ ಕೊಟ್ಟಿದ್ದೀರಿ. ಇದೀಗ ಬದಲಾವಣೆಯತ್ತ ಹೆಜ್ಜೆ ಹಾಕಬೇಕೆಂದು ತಿಳಿಸಿದರು.
ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



