ರಾಜ್ಯ

ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಯಡವಟ್ಟು, 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್ʼನ ಅವಾಂತರದ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.

ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಯಡವಟ್ಟು, 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ
ಸರಣಿ ಅಪಘಾತ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್ʼನ ಅವಾಂತರದ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.

ಸಿಟಿ ಮಾರ್ಕೆಟ್ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ, ಗಾಬರಿಯಲ್ಲಿ ಬ್ರೇಕ್ ಬದಲು ಎಕ್ಸಲರೇಟರ್ ತುಳಿದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದ ವೇಳೆ ಕಾರಿನಲ್ಲಿದ್ದ 4 ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದು, ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಚಾಲಕ ಸುಮಂತ್​​ನನ್ನ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.