ರಾಜ್ಯ ಸರ್ಕಾರ ಕೊಂಚ ನಿರಾಳ: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ನವದೆಹಲಿ/ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದ್ದು ಇನ್ನು 14 ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿ ರೈತರು ಸಂಕಷ್ಟ ಅನುಭವಿಸಿದ್ದರು.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,172 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳುಗಳೇ ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸಹಿತ ಸಂಪುಟ ಸಚಿವರು ಆರೋಪಿಸುತ್ತಿದ್ದರು.
ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅದರಂತೆ ಕಳೆದ ವಾರ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್ನಲ್ಲಿ ಒಪ್ಪಿಕೊಂಡಿತ್ತು. ಅದರಂತೆ ಸದ್ಯ ಕೇಂದ್ರ ಸರ್ಕಾರ ಬರ ಪರಿಹಾರ ಘೋಷಣೆ ಮಾಡಿದೆ.
ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂಪಾಯಿ ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


