ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ, ಬಾರ್‌ನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಆರೋಪಿಗಳು; ಇಬ್ಬರ ಬಂಧನ
ಆನೇಕಲ್‌ನ ಬಾರ್‌ವೊಂದರಲ್ಲಿ ಸ್ನೇಹಿತನಿಗೆ ಮದ್ಯ ಕುಡಿಸಿ ಬೆಂಕಿ ಹಚ್ಚಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತನನ್ನು ಕೆ ನಾಗೇಶ್ ಎಂದು ಗುರುತಿಸಲಾಗಿದ್ದು, ಬಾರ್‌ನಲ್ಲಿ ಮದ್ಯಪಾನ ಮಾಡುವಾಗ ಕ್ಷುಲ್ಲಕ ವಿಷಯಕ್ಕೆ ತನ್ನ ಮೂವರು ಸ್ನೇಹಿತರೊಂದಿಗೆ ಜಗಳವಾಡಿದ್ದಾನೆ ಎಂದು ವರದಿಯಾಗಿದೆ.

ಬೆಂಗಳೂರು: ಆನೇಕಲ್‌ನ ಬಾರ್‌ವೊಂದರಲ್ಲಿ ಸ್ನೇಹಿತನಿಗೆ ಮದ್ಯ ಕುಡಿಸಿ ಬೆಂಕಿ ಹಚ್ಚಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತನನ್ನು ಕೆ ನಾಗೇಶ್ ಎಂದು ಗುರುತಿಸಲಾಗಿದ್ದು, ಬಾರ್‌ನಲ್ಲಿ ಮದ್ಯಪಾನ ಮಾಡುವಾಗ ಕ್ಷುಲ್ಲಕ ವಿಷಯಕ್ಕೆ ತನ್ನ ಮೂವರು ಸ್ನೇಹಿತರೊಂದಿಗೆ ಜಗಳವಾಡಿದ್ದಾನೆ ಎಂದು ವರದಿಯಾಗಿದೆ.
ಮಾತಿನ ಚಕಮಕಿಯಲ್ಲಿ ಆರೋಪಿಗಳು ನಾಗೇಶ್ ಮೇಲೆ ಟೇಬಲ್ ಮೇಲಿದ್ದ ಮದ್ಯ ಎರಚಿ, ಸಿಗರೇಟಿನಿಂದ ಬೆಂಕಿ ಹಚ್ಚಿದ್ದಾರೆ. ಬಾರ್‌ಗೆ ಬೆಂಕಿ ಹೊತ್ತಿಕೊಳ್ಳುವ ಮುನ್ನ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈಮಧ್ಯೆ, ನಾಗೇಶ್ ಅವರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಿಗೆ ಶೇ 30 ರಷ್ಟು ಸುಟ್ಟ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆನೇಕಲ್‌ನ ಮುತ್ತಘಟ್ಟ ಗ್ರಾಮದ ನಿವಾಸಿಯಾಗಿರುವ ನಾಗೇಶ್ ಚಾಲಕನಾಗಿದ್ದಾರೆ. ಏಪ್ರಿಲ್ 22 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಆನೇಕಲ್-ಹೊಸೂರು ರಸ್ತೆಯ ಸಂಜಯ್ ಬಾರ್‌ನಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಗಳನ್ನು ಮಲ್ಲಿಕ್, ವೆಂಕಟಸ್ವಾಮಿ ಮತ್ತು ಮುನಿರಾಜು ಎಂದು ಗುರುತಿಸಲಾಗಿದೆ. ವೆಂಕಟಸ್ವಾಮಿ ಮತ್ತು ಮುನಿರಾಜು ಅವರನ್ನು ಗುರುವಾರ ಬಂಧಿಸಲಾಗಿದ್ದು, ಮಲ್ಲಿಕ್ ತಲೆಮರೆಸಿಕೊಂಡಿದ್ದಾನೆ. ಈ ಮೂವರು ಆರೋಪಿಗಳು ಆನೇಕಲ್ ನಿವಾಸಿಗಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



