ಕಾರಿನಲ್ಲಿ 1.99 ಕೋಟಿ ರೂ ಪತ್ತೆ: ಕಾಂಗ್ರೆಸ್ ಮುಖಂಡ ಶರಣಕುಮಾರ್ ಮೋದಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಇತ್ತೀಚಿಗೆ ಕಾರಿನಲ್ಲಿ 1.99 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಬೆಂಗಳೂರು: ಇತ್ತೀಚಿಗೆ ಕಾರಿನಲ್ಲಿ 1.99 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.
ಕಳೆದ ಶನಿವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಶರಣಕುಮಾರ್ ಮೋದಿಯವರ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆರಹಿತ 1.99 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಮುಖಂಡ ಮತ್ತು ಕಲಬುರಗಿಯ ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಎಫ್ಐಆರ್ ದಾಖಲಿಸಲಾಗಿದೆ ಮತ್ತು 1.99 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲಂಚ ಮತ್ತು ಅನಗತ್ಯ ಪ್ರಭಾವ ಬಳಸಿದ ಆರೋಪದ ಮೇಲೆ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



