ರಾಜ್ಯ

ರಾಮನಗರ: ಈಜಲು ತೆರಳಿದ್ದ ಬೆಂಗಳೂರು ಮೂಲದ ಐವರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲು

ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟಿನಲ್ಲಿ ನಡೆದಿದೆ.

ರಾಮನಗರ: ಈಜಲು ತೆರಳಿದ್ದ ಬೆಂಗಳೂರು ಮೂಲದ ಐವರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲು
ಸಾಂದರ್ಭಿಕ ಚಿತ್ರ
Published On :

ರಾಮನಗರ: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟಿನಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದಲ್ಲಿ ಈಜಲು ಹೋದವರು ನಾಪತ್ತೆಯಾಗಿದ್ದರು. ಇದೀಗ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೀಣ್ಯ ಎರಡನೇ ಹಂತದ ಹರ್ಷಿತ(20), ಅಭಿಷೇಕ್(20), ತೇಜಸ್(21), ವರ್ಷಾ(20) ಹಾಗೂ ಸ್ನೇಹ(19) ಮೃತರು. ಮೇಕೆದಾಟು ಬಳಿ ಆಳವಾದ ಜಾಗದಲ್ಲಿ ಈಜುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ‌ ಕೊನೆಯುಸಿರೆಳೆದಿದ್ದಾರೆ.

ಕಾವೇರಿ ನದಿಯಿಂದ ಐವರು ವಿದ್ಯಾರ್ಥಿಗಳ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣೆ ಪೊಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಿಂದ ಒಟ್ಟು 12 ವಿದ್ಯಾರ್ಥಿಗಳ ಇಲ್ಲಿಗೆ ಬಂದಿದ್ದರು. ಈ ಪೈಕಿ ಐವರು ಈಜುತ್ತಿದ್ದ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. ಉಳಿದ ಏಳು ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ನೀರಿನಲ್ಲಿ ಮುಳುಗಿದ ನಂತರ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.