ರಾಜ್ಯ

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಎ1 ಆರೋಪಿ, ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಎಸ್ ಐಟಿ ನೋಟಿಸ್

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ, ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರಿಗೆ ಎಸ್​ಐಟಿ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಎ1 ಆರೋಪಿ, ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಎಸ್ ಐಟಿ ನೋಟಿಸ್
ಪ್ರಜ್ವಲ್ ರೇವಣ್ಣ - ಎಚ್​ಡಿ ರೇವಣ್ಣ
Published On :

ಹಾಸನ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ, ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ(ಎಸ್​ಐಟಿ) ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಸಿಆರ್​ಪಿಸಿ 41(A) ಅಡಿಯಲ್ಲಿ ಎಸ್ಐಟಿ, ಎಚ್ ಡಿ ರೇವಣ್ಣ ಅವರಿಗೆ ನೋಟಿಸ್ ನೀಡಿದ್ದು, ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಲವು ವಿಡಿಯೋಗಳು ಬಹಿರಂಗವಾದ ನಂತರ ಹಾಸನ ಸಂಸದರ ವಿರುದ್ಧದ ಆರೋಪಗಳ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಾನುವಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ ಮತ್ತು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ.

ಪ್ರಕರಣ ಸಂಬಂಧ ಎಡಿಜಿಪಿ-ಸಿಐಡಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಹೆಚ್ಚುವರಿ ಕಮಿಷನರ್ ಸುಮನ್ ಡಿ ಪೆನ್ನೇಕರ್ ಮತ್ತು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರನ್ನೊಳಗೊಂಡ ಎಸ್ಐಟಿ ತಂಡ ತನಿಖೆ ಆರಂಭಿಸಿದೆ.

ಪೊಲೀಸರು ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 354ಡಿ (ಮಹಿಳೆಗೆ ಮುಜುಗರ), 506 (ಬೆದರಿಕೆ), 509 (ಮಹಿಳೆಯರ ಮರ್ಯಾದೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ರೇವಣ್ಣ ಅವರನ್ನು ಎ1 ಆರೋಪಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಎ2 ಆರೋಪಿಯನ್ನಾಗಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.