ಭೀತಿ ಹುಟ್ಟಿಸಿದ ಕೃಷ್ಣೆ: ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಲಕ್ಷ್ಮಣ್ ಸವದಿ ಸೂಚನೆ
ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಲಕ್ಷ್ಮಣ್ ಸವದಿ ಅವರು ಬುಧವಾರ ತುರ್ತು ಸಭೆ ನಡೆಸಿದರು.

ಅಥಣಿ: ಕೃಷ್ಣಾ ನದಿ ಪ್ರವಾಹ ಇಳಿಕೆಯಾಗದ ಕಾರಣ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿಯವರು ಬುಧವಾರ ಸೂಚನೆ ನೀಡಿದರು.
ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕರು ಬುಧವಾರ ತುರ್ತು ಸಭೆ ನಡೆಸಿದರು.
ಸಭೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರವಂತೆ ಹೆಚ್ಚುವರಿ ಪುನರ್ವಸತಿ ಕೇಂದ್ರಗಳು, ವೈದ್ಯಕೀಯ ಉಪಕರಣಗಳು, ಔಷಧಿಗಳು, ಆಹಾರ ಉತ್ಪನ್ನ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳ ನಡೆಸುವತೆ ಸೂಚನೆ ನೀಡಿದರು.
ಯಾವುದೇ ಕ್ಷಣದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆಯಿರುವ ಗ್ರಾಮಗಳಲ್ಲಿ ಅಲ್ಲಿನ ಜನರನ್ನು ಮುಂಚಿತವಾಗಿ ಸ್ಥಳಾಂತರಿಬೇಕು. ಪ್ರತಿಯೊಬ್ಬ ನೋಡಲ್ ಅಧಿಕಾರಿ ಮತ್ತು ಇತರ ಸಂಬಂಧಪಟ್ಟ ಸಿಬ್ಬಂದಿಗಳು ಪ್ರವಾಹದ ಸಮಯದಲ್ಲಿ ನಿಯೋಜನೆಗೊಂಡ ಗ್ರಾಮದಲ್ಲಿಯೇ ಮೊಕ್ಕಾಂ ಹೂಡಿರಬೇಕು ಎಂದೂ ಇದೇ ವೇಳೆ ಸೂಚಿಸಿದರು.
ಸಭೆ ಬಳಿಕ ಶಾಸಕರು ಶಿರಟ್ಟಿ, ನಂದೇಶ್ವರ, ಸಪ್ತಸಾಗರ ಸೇರಿದಂತೆ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



