ರಾಜ್ಯ

Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಜುಲೈ 18ರಂದು ಭಾರತದ ಪ್ರಜೆಯೊಬ್ಬನನ್ನು ಬಂಧಿಸಿ 3,6 ಕೋಟಿ ರೂ.ಮೌಲ್ಯದ 3.6 ಕೆಜಿ ತೂಕದ ನಿಷೇಧಿತ ಹೈಡ್ರೋಪೋನಿಕ್‌ ಎಂಬ ವೀಡ್‌ ಎಂಬ ಮಾದಕ ವಸ್ತುವನ್ನು ಆತನಿಂದ ವಶಪಡಿಸಿಕೊಳ್ಳಲಾಗಿತ್ತು.

Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಸಂಗ್ರಹ ಚಿತ್ರ
Published On :

ಬೆಂಗಳೂರು: ಸುಮಾರು 10 ಕೋಟಿ ರೂ. ಮೌಲ್ಯದ ಕೊಕೈನ್‌ ಡ್ರಗ್ಸ್‌ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಬೆಂಗಳೂರು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ.

ಈ ಮಹಿಳೆ ಜುಲೈ 26ರಂದು ದುಬೈನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈಕೆಯನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಕೊಕೈನ್‌ ಅನ್ನು ಕಳ್ಳ ಸಾಗಾಣೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾಳೆ.

ನಂತರ ಮಹಿಳೆ ವಿರುದ್ಧ ನಾರ್ಕೋಟಿಕ್‌ ಡ್ರಗ್ಸ್‌ ಮತ್ತು ಸೈಕೋಟ್ರೋಪಿಕ್‌ ಡ್ರಗ್ಸ್‌ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಕೊಕೈನ್‌ ಗುಳಿಗೆಗಳನ್ನು ಹೊಟ್ಟೆಯಲ್ಲಿ ಅಡಗಿಸಿ ಕೊಂಡಿರುವುದು ಪತ್ತೆಯಾಗಿದೆ.

ಒಂದು ಕೆಜಿ ತೂಕದ 57 ಗುಳಿಗೆಗಳನ್ನು ಆಕೆಯ ದೇಹದಿಂದ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.

ಜುಲೈ 18ರಂದು ಭಾರತದ ಪ್ರಜೆಯೊಬ್ಬನನ್ನು ಬಂಧಿಸಿ 3,6 ಕೋಟಿ ರೂ.ಮೌಲ್ಯದ 3.6 ಕೆಜಿ ತೂಕದ ನಿಷೇಧಿತ ಹೈಡ್ರೋಪೋನಿಕ್‌ ಎಂಬ ವೀಡ್‌ ಎಂಬ ಮಾದಕ ವಸ್ತುವನ್ನು ಆತನಿಂದ ವಶಪಡಿಸಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.