ರಾಜ್ಯ

ರೈತನಿಗೆ ಅಪಮಾನ ಪ್ರಕರಣ: ತಾರತಮ್ಯ ತೋರಿದರೆ ಪರವಾನಗಿ ರದ್ದು, ಮಾಲ್‌ಗಳಿಗೆ BBMP ಎಚ್ಚರಿಕೆ!

ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ರೈತನಿಗೆ ಅಪಮಾನ ಪ್ರಕರಣ: ತಾರತಮ್ಯ ತೋರಿದರೆ ಪರವಾನಗಿ ರದ್ದು, ಮಾಲ್‌ಗಳಿಗೆ BBMP ಎಚ್ಚರಿಕೆ!
ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ)
Published On :

ಬೆಂಗಳೂರು: ಪಂಚೆಯುಟ್ಟಿದ್ದ ರೈತನಿಗೆ ಜಿಟಿ ಮಾಲ್‌ ಅಪಮಾನ ಮಾಡಿದ್ದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮಾಲ್‌ಗಳಿಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ವಾಣಿಜ್ಯ ಸಮುಚ್ಛಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ.

ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡಬಾರದು. ಎಲ್ಲಾ ವಾಣಿಜ್ಯ ಸಮುಚ್ಚಯಗಳು ಉಡುಪಿನ ಆಧಾರದ ಮೇಲೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು ಎಂದು ಸೂಚಿಸಿದೆ.

ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಇತ್ತಿಚೆಗೆ ಜಿಟಿ ಮಾಲ್ನಲ್ಲಿ ಪಂಚೆ ಉಟ್ಟುಕೊಂಡು ಮಾಲ್ ಪ್ರವೇಶಿಸಲು ಮುಂದಾದ ವ್ಯಕ್ತಿಯೊಬ್ಬರನ್ನು ಕಾವಲುಗಾರ ತಡೆದು ನಿಲ್ಲಿಸಿದ್ದು ಭಾರಿ ಸಂಚಲನ ಸೃಷ್ಟಿಸಿತ್ತು. ಮಾಲ್' ಸಿಬ್ಬಂದಿಗಳ ವರ್ತನೆಗೆ ಕನ್ನಡಿಗರು ಕಿಡಿಕಾರಿದ್ದರು ಅಲ್ಲದೆ, ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಬಳಿಕ ಮಾಲ್ ಮಾಲೀಕರೇ ವ್ಯಕ್ತಿಯನ್ನು ಕರೆದು ಸನಾನ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.