ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳಿಗೆ ವೇಗದ ಮಿತಿ ನಿಗದಿ!
ಚಾಲಕನ ಆಸನದ ಜೊತೆಗೆ (M1 ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ. ಎಂದು ನಿಗದಿಪಡಿಸಲಾಗಿದೆ.

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನ ಚಾಲಕರ ಅಜಾಗರೂಕತೆ, ನಿರ್ಲಕ್ಷ್ಯ ಮತ್ತು ಅತಿವೇಗದಿಂದ ಹಲವಾರು ಗಂಭೀರ ಮತ್ತು ಮಾರಣಾಂತಿಕ ಅಪಘಾತಗಳು ಸಂಭವಿಸಿರುವುದರಿಂದ ರಸ್ತೆ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬೆಂಗಳೂರು ಸಂಚಾರಿ ಪೊಲೀಸರ ಪ್ರಕಾರ, ಚಾಲಕನ ಆಸನದ ಜೊತೆಗೆ (M1 ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ. ಎಂದು ನಿಗದಿಪಡಿಸಲಾಗಿದೆ.
ಚಾಲಕನ ಆಸನದ ಜೊತೆಗೆ ಒಂಬತ್ತು ಅಥವಾ ಅದಕ್ಕಿಂತ ಹೆಚ್ಚಿನ ಆಸನಗಳನ್ನು ಹೊಂದಿರುವ ಮೋಟಾರು ವಾಹನಗಳಿಗೆ ಗಂಟೆಗೆ 100 ಕಿ.ಮೀ ಮತ್ತು ಸರಕು ಸಾಗಣೆಗೆ ಬಳಸುವ ಮೋಟಾರ್‌ಸೈಕಲ್‌ಗಳು ಮತ್ತು ವಾಹನಗಳ ವೇಗದ ಮಿತಿಯನ್ನು ಗಂಟೆಗೆ 80 ಕಿಮೀ ಎಂದು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.
ಇದಲ್ಲದೇ ನೈಸ್ ರಸ್ತೆಯಲ್ಲಿ ಎಲ್ಲಾ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳನ್ನು ಬಳಸದಂತೆ ಪೊಲೀಸರು ನಿರ್ಬಂಧ ಹೇರಿದ್ದು, ಆಗಸ್ಟ್ 2 ರಿಂದ ಈ ನಿರ್ಬಂಧಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



