BBMP ಕಚೇರಿಯಲ್ಲಿ ಅಗ್ನಿ ಅವಘಡ; ಕೆಲ ದಾಖಲೆಗಳು ಸುಟ್ಟು ಭಸ್ಮ
ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಬೆಂಗಳೂರು: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳೆದ ವರ್ಷ 2023 ಆಗಸ್ಟ್ 11 ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಬರೋಬ್ಬರಿ 9 ಮಂದಿ ಗಾಯಗೊಂಡಿದ್ದರು.
ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 9 ಮಂದಿಯನ್ನು ಪೊಲೀಸ್ ವಾಹನದಲ್ಲಿಯೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



