ರಾಜ್ಯ

ಇ-ಹರಾಜು ಇಲ್ಲದೆಯೇ ಎಫ್‌ಸಿಐನಿಂದ ಅಕ್ಕಿ ಖರೀದಿಸಲು ರಾಜ್ಯಗಳಿಗೆ ಕೇಂದ್ರ ಅನುಮತಿ

"ರಾಜ್ಯಗಳು ಇ-ಹರಾಜಿನಲ್ಲಿ ಭಾಗವಹಿಸದೆಯೇ ಭಾರತೀಯ ಆಹಾರ ನಿಗಮದಿಂದ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ(ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ 2,800 ರೂ.ಗೆ ಖರೀದಿಸಬಹುದು".

ಇ-ಹರಾಜು ಇಲ್ಲದೆಯೇ ಎಫ್‌ಸಿಐನಿಂದ ಅಕ್ಕಿ ಖರೀದಿಸಲು ರಾಜ್ಯಗಳಿಗೆ ಕೇಂದ್ರ ಅನುಮತಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಇ-ಹರಾಜಿನಲ್ಲಿ ಭಾಗವಹಿಸದೆ ಭಾರತೀಯ ಆಹಾರ ನಿಗಮ(ಎಫ್‌ಸಿಐ)ದಿಂದ ನೇರವಾಗಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

"ರಾಜ್ಯಗಳು ಇ-ಹರಾಜಿನಲ್ಲಿ ಭಾಗವಹಿಸದೆಯೇ ಭಾರತೀಯ ಆಹಾರ ನಿಗಮದಿಂದ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ(ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ 2,800 ರೂ.ಗೆ ಖರೀದಿಸಬಹುದು" ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹೊಸ ಖರೀದಿ ಅವಧಿಗೆ ಮುನ್ನ ಎಫ್‌ಸಿಐ ಗೋಡೌನ್‌ಗಳಲ್ಲಿರುವ ಬೃಹತ್ ಹೆಚ್ಚುವರಿ ದಾಸ್ತಾನುಗಳನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಕಳೆದ ವರ್ಷ ಇ-ಹರಾಜಿನಲ್ಲಿ ಭಾಗವಹಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ನಿರ್ಬಂಧಗಳನ್ನು ವಿಧಿಸಿತ್ತು. ಇದು ಕರ್ನಾಟಕ ಸರ್ಕಾರದ ಅಕ್ಕಿ ಖರೀದಿ ಮೇಲೆ ಪರಿಣಾಮ ಬೀರಿತ್ತು.

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ, ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಈಡೇರಿಸಲು 2.34 ಲಕ್ಷ ಟನ್‌ಗಳಷ್ಟು ಹೆಚ್ಚುವರಿ ಅಕ್ಕಿಯ ಅಗತ್ಯವಿತ್ತು. ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.