ಮುಡಾ ಅಕ್ರಮ ಗದ್ದಲ: ಇಂದು ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆ ಆರಂಭ
ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಇಂದು ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MUDA) ನೀವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇಷ್ಟು ದಿನ ಆಗ್ರಹಿಸುತ್ತಲೇ ಬಂದಿದ್ದು ವಿಪಕ್ಷಗಳು ತಮ್ಮ ಪ್ರತಿಭಟನೆ, ಹೋರಾಟವನ್ನು ಪಾದಯಾತ್ರೆ ಮೂಲಕ ಇಂದು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ.
ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಇಂದು ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.
ಇಂದು ಶನಿವಾರ ಆಗಸ್ಟ 3 ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್ನಲ್ಲಿ ಪಾದಯಾತ್ರೆ ಉದ್ಘಾಟನೆ ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್‌ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಭಾಗಿಯಾಗಲಿದ್ದಾರೆ.
ಬಳಿಕ ಇಂದು 10 ಗಂಟೆ ಸುಮಾರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಪಾದಯಾತ್ರೆ ಆರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ವಿಜಯೇಂದ್ರ ಭೇಟಿ: ಮೈಸೂರು ಚಲೋ ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಮಾಡಿ ಪೂಜೆ ಸಲ್ಲಿಸಿ ಬಳಿಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


