ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್: ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಸಭೆ ನಡೆಸುತ್ತೇವೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಹಾಗೂ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ಜನಾಂದೋಲನ ನಡೆಸುತ್ತಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಇಂದು ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಟಕ್ಕರ್ ಕೊಡಲು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮನಗರದಲ್ಲಿ ಇಂದು ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ.
ನಿತ್ಯ ಒಂದೊಂದು ತಾಲ್ಲೂಕಿನಲ್ಲಿ ಸಭೆ: ಇಂದು ರಾಮನಗರದಲ್ಲಿ ಸಭೆ, ನಾಳೆ ಚನ್ನಪಟ್ಟಣ, ಆಗಸ್ಟ್ 5 ಮದ್ದೂರು, ಆಗಸ್ಟ್ 6 ಮಂಡ್ಯ, ಆಗಸ್ಟ್ 9ರಂದು ಮೈಸೂರಿನಲ್ಲಿ ಬಹಿರಂಗ ಸಮಾರೋಪ ಸಭೆ ನಡೆಸಲಿದ್ದೇವೆ. ಬಿಜೆಪಿ, ಜೆಡಿಎಸ್ ವಿರುದ್ಧ ನಾವು ಯಾವುದೇ ಪಾದಯಾತ್ರೆ ನಡೆಸುವದಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈಗಾಗಲೇ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಸಭೆ ನಡೆಸುತ್ತೇವೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಹಾಗೂ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ಜನಾಂದೋಲನ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


