ರಾಜ್ಯ

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು

ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಸಿಎಂ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.

ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.

ಸಮನ್ವಯ ಸಮಿತಿ ಸಂಚಾಲಕ ಶಶಿಕುಮಾರ್ ಡಿ, ಶಿಕ್ಷಣದ ಕೆಲವು ನಿರ್ಣಾಯಕ ಅಂಶಗಳ ಬಗ್ಗೆ ಸರ್ಕಾರವು ನಿರ್ಧರಿಸುತ್ತಿರುವ ರೀತಿ ನಮಗೆ ಸಮಾಧಾನವಿಲ್ಲ. ಅಧಿಕಾರಿಗಳು ಕೂಡ ಬೇರೆ ಬೇರೆ ಕಾರಣಗಳಿಗಾಗಿ ಶಾಲೆಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ ಎಂದರು.

ಈ ಹಿಂದೆಯೂ ಸಮಿತಿ, ಖಾಸಗಿ ಶಾಲೆಗಳಲ್ಲಿನ ವಿವಿಧ ಬೋರ್ಡ್‌ಗಳ ಮಾನ್ಯತೆ ಮತ್ತು ಅನಧಿಕೃತ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಇಲಾಖೆಯು ಇಚ್ಛಿಸದಿರುವ ಅಕ್ರಮಗಳನ್ನು ಬಯಲಿಗೆಳೆದಿತ್ತು, ಅಧಿಕೃತ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸಮಿತಿ ಮತ್ತು ಪೋಷಕರು ಎತ್ತಿದ ಮತ್ತೊಂದು ಸಮಸ್ಯೆಯೆಂದರೆ 6,8 ಮತ್ತು 9 ನೇ ತರಗತಿಗಳಂತಹ ಕೆಳ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದು. ಪೋಷಕರು ಮತ್ತು ಸಂಬಂಧಪಟ್ಟವರು ಸರ್ಕಾರವು ಎನ್‌ಸಿಇಆರ್‌ಟಿಗೆ ಅನುಗುಣವಾಗಿ ಪಠ್ಯಕ್ರಮವನ್ನು ಪ್ರಮಾಣೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.