KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಿಸಿದ KPSC
ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು.

ಬೆಂಗಳೂರು: ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆಯಾಗಿದೆ. ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು.
ಆದರೆ ಇದೇ ದಿನದಂದು ಬ್ಯಾಂಕಿಂಗ್ ಪರೀಕ್ಷೆಯೂ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಎಸ್ ಅಭ್ಯರ್ಥಿಗಳು ಪರೀಕ್ಷೆ ದಿನಾಂಕ ಮುಂದೂಡುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ್ದ ಸಿಎಂ ಸಿದ್ದರಾಮಯ್ಯ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಸೂಚಿಸಿದ್ದರು.
ಅದರಂತೆ ಇದೀಗ ಆಗಸ್ಟ್ 25ರ ಬದಲಾಗಿ ಆ.27 (ಮಂಗಳವಾರ) ರಂದು ನಡೆಸಲು ತೀರ್ಮಾನಿಸಲಾಗಿದೆ. ಆ.25ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



