MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮಂಗಳವಾರ ಮತ್ತೊಂದು ದೂರು ದಾಖಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ಮತ್ತೊಂದು ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.
ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, '1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರರು ದೂರಿನಲ್ಲಿ ಆರೋಪಿಸಿದ್ದಾರೆ.
ಅಂತೆಯೇ ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಭಯ
ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ತಂಡ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



