ಇಡಿ ವಿರುದ್ಧ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಗೆ ಕೋರ್ಟ್ ಸಮನ್ಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ಪದೇ ಪದೇ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 29 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ನ್ಯಾಯಾಲಯ ಗುರುವಾರ ಸಮನ್ಸ್ ಜಾರಿ ಮಾಡಿದೆ.
ಜೂನ್ 2022 ರಲ್ಲಿ, ಎರಡು ವರ್ಷಗಳ ಹಿಂದೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ಪದೇ ಪದೇ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.
ರಾಹುಲ್ ಗಾಂಧಿಯವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ಇಡಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಪ್ರತಿಭಟನೆಯನ್ನು ಆಯೋಜಿಸಿತ್ತು. ಆದರೆ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕೆಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು. ಈ ಆದೇಶ ಉಲ್ಲಂಘಿಸಿ ಡಿ.ಕೆ.ಶಿವಕುಮಾರ್ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿದ್ದರು.
ಆದೇಶವನ್ನು ಧಿಕ್ಕರಿಸಿದ ಸಿದ್ದರಾಮಯ್ಯ, ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರತಿಭಟನೆಯಿಂದ ಸಾರ್ವಜನಿಕ ಶಾಂತಿಗೆ ಭಂಗವುಂಟಾಗಿದೆ ಮತ್ತು ಅಧಿಕಾರಿಗಳಿಂದ ಅಗತ್ಯ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಇದೇ ಪ್ರತಿಭಟನೆ ಸಂಬಂಧ ಡಿಕೆ ಶಿವಕುಮಾರ್ ಅವರ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದೀಗ ವಿಲ್ಸನ್ ಗಾರ್ಡನ್ ಕೇಸ್ನಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



