ರಾಜ್ಯ

ಪ್ರತ್ಯೇಕ ಅಪಘಾತ: ಮೂವರು ಬೈಕ್ ಸವಾರರ ದುರ್ಮರಣ

ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬೈಕ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ

ಪ್ರತ್ಯೇಕ ಅಪಘಾತ: ಮೂವರು ಬೈಕ್ ಸವಾರರ ದುರ್ಮರಣ
ಡಿಕ್ಕಿಯಾಗಿ ಲಾರಿ ಅಡಿಯಲ್ಲಿ ಸಿಲುಕಿರುವ ಬೈಕ್ ಚಿತ್ರ
Published On :

ಬೆಂಗಳೂರು: ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.

ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬೈಕ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಶಂಕರ್ (26) ಮೃತ ದುರ್ದೈವಿ. ಶಂಕರ್, ಸುಂಕಪ್ಪ ಇಬ್ಬರೂ ಪಿಕೆ ಹಳ್ಳಿ ಗ್ರಾಮದವರು. ಬುಕ್ಕಸಾಗರಿಂದ ಗಂಗಾವತಿಯತ್ತ ಬೈಕ್ ಬರುವಾಗ ಮುಖಾಮುಖಿ ಡಿಕ್ಕಿ ಆಗಿದೆ. ಮತ್ತೊಂದೆಡೆ, ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬೈಕ್‌ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಕೊಡಗಿನ ಸುಂಟಿಕೊಪ್ಪ ಬಳಿಯ ಶಾಂತಿಗೇರಿಯಲ್ಲಿ ರಾತ್ರಿ ಅಪಘಾತ ನಡೆದಿದೆ.

ಡಿಕ್ಕಿ ರಭಸಕ್ಕೆ ಬೈಕ್‌ ಸವಾರರು ಇಬ್ಬರು ದುರ್ಮರಣ ಹೊಂದಿದ್ದಾರೆ. ಪ್ರಸನ್ನ(24), ಆಕಾಶ್(24) ಮೃತ ದುರ್ದೈವಿಗಳು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.