ಬೆಂಗಳೂರು: ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ!
ತುಮಕೂರು ಜಿಲ್ಲೆಯ ಶಿರಾ ಮೂಲದ ಪುನೀತ್ ರಸ್ತೆಗೆ ಕಸ ತುಂಬಿದ ಕವರ್ ಎಸೆದು, ಗುಟ್ಕಾ ಉಗಿದು ಹೋಗುತ್ತಿದ್ದ. ಇದನ್ನು ನೋಡಿದ ಸಿದ್ದಪ್ಪ ಅವರು ಪುನೀತ್ ಗೆ ಪ್ರಶ್ನಿಸಿ ಬೈದಿದ್ದಾರೆನ್ನಲಾಗಿದೆ.

ಬೆಂಗಳೂರು: ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಸಿದ್ದಪ್ಪ (78) ಕೊಲೆಯಾದ ವೃದ್ಧ ವ್ಯಕ್ತಿ. ಆರೋಪಿಯನ್ನು ಪುನಿತ್ (22) ಎಂದು ಗುರ್ತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರಿಂದ 9.00 ರ ನಡುವೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ಮೂಲದ ಪುನೀತ್ ರಸ್ತೆಗೆ ಕಸ ತುಂಬಿದ ಕವರ್ ಎಸೆದು, ಗುಟ್ಕಾ ಉಗಿದು ಹೋಗುತ್ತಿದ್ದ. ಇದನ್ನು ನೋಡಿದ ಸಿದ್ದಪ್ಪ ಅವರು ಪುನೀತ್ ಗೆ ಪ್ರಶ್ನಿಸಿ ಬೈದಿದ್ದಾರೆನ್ನಲಾಗಿದೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಂಡಾಮಂಡಲಗೊಂಡಿರುವ ಪುನೀತ್ ಹತ್ತಿರದಲ್ಲೇ ಇದ್ದ ತನ್ನ ಮನೆಯಿಂದ ಮಚ್ಚು ತಂದು ತಲೆ ಹಾಗೂ ಕತ್ತಿನ ಭಾಗಕ್ಕೆ ಹೊಡೆದು ಕೊಲೆ ಹತ್ಯೆ ಮಾಡಿದ್ದಾನೆ.
ಈ ವೇಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಿದ್ದಪ್ಪ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸಿದ್ದಪ್ಪ ಅವರು ಕೊನೆಯುಸಿರೆಳೆದಿದ್ದಾರೆ.
ಬಳಿಕ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಮಾದನಾಯ್ಕಹಳ್ಳಿ ಠಾಣೆ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಚಿಕ್ಕಬಿದರಕಲ್ಲಿನ ತನ್ನ ಅಣ್ಣನ ಮನೆಯಲ್ಲಿ ಅಡಗಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



