ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್
‘ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ’ ಎಂದಿದ್ದರು. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ. ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ.

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ.
ಹಿಂದೂ ಧರ್ಮಕ್ಕೆ ನಿಂದನೆ ಮಾಡುವ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
2022ರ ನವೆಂಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜಾರಕಿಹೊಳಿ, ‘ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ’ ಎಂದಿದ್ದರು. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ. ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಭಾರತಕ್ಕೂ, ಪರ್ಷಿಯನ್‌ಗೂ ಏನು ಸಂಬಂಧ. ಹಿಂದೂ ಪದ ಹೇಗೆ ನಮ್ಮದಾಯಿತು ಎಂಬ ಬಗ್ಗೆ ಚರ್ಚೆಯಾಗಬೇಕಿದೆ’ ಎಂದು ಹೇಳಿಕೆ ನೀಡಿದ್ದರು.

ಒಂದು ವೇಳೆ ಸಿದ್ದರಾಮಯ್ಯ ರಾಜಿನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಮುಂದಿನ CM: ಪರೋಕ್ಷವಾಗಿ ಡಿಕೆಶಿಗೆ ರಾಜಣ್ಣ ಟಾಂಗ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


