ಸಕಲೇಶಪುರದಲ್ಲಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ
ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್ ಮಾಡಲಾಗಿದೆ.

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ ರಾತ್ರಿ ಹೊರಟಿದ್ದ ಈ ಎರಡು ರೈಲುಗಳು ಹಾಸನ ಹಾಗೂ ಆಲೂರು ನಿಲ್ದಾಣದಲ್ಲಿ ಸ್ಥಗಿತವಾಗಿದೆ. ವೀಕೆಂಡ್‌ನಲ್ಲಿ ಊರಿಗೆ ಹೊರಟಿದ್ದ ಪ್ರಯಾಣಿಕರಿಗೆ ಭೂಕುಸಿತದಿಂದ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ. ರೈಲ್ವೆ ವಲಯವು ಸದ್ಯದ ಮಟ್ಟಿಗೆ ಪಡೀಲ್-ಹಾಸನ ಜಂಕ್ಷನ್ ನಡುವಿನ ರೈಲುಗಳ ಓಡಾಟವನ್ನು ಸ್ಥಗಿತಗೊಳಿಸಿದೆ. ಈ ನಡುವೆ ಭೂಕುಸಿತವಾದ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಮುಂದುವರೆದಿದ್ದು ಕೆಲವೇ ಹೊತ್ತಿನಲ್ಲಿ ರೈಲಿನ ಓಡಾಟ ಆರಂಭಗೊಳಿಸಲಾಗುವುದು ಎಂದು ಡಿಆರ್‌ಎಂ ಮೈಸೂರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ.
ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್ ಮಾಡಲಾಗಿದೆ. ಆಲೂರು-ಹಾಸನ ಮಾರ್ಗದ ರೈಲು ಸಂಚಾರವೂ ಸ್ಥಗಿತಗೊಂಡಿದೆ. ಸಕಲೇಶಪುರ, ಯಡಕುಮಾರಿ, ಶಿರಿಬಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಪರದಾಡಿದರು. ಸಾವಿರಾರು ಪ್ರಯಾಣಿಕರು ಬೆಳಗಿನ ಜಾವದವರೆಗೆ ರೈಲಿನಲ್ಲೇ ಕಳೆದರು. ಬೆಳಗ್ಗೆ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ವಾಹನಗಳ ವ್ಯವಸ್ಥೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



