ತುಂಗಭದ್ರಾ ಜಲಾಶಯ 19ನೇ ಗೇಟ್ ಲಿಂಕ್ ಮುರಿತ: ನದಿ ಪಾತ್ರಕ್ಕೆ ಅಪಾರ ಪ್ರಮಾಣದ ನೀರು; ಜನರಲ್ಲಿ ಆತಂಕ
ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ: ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ಮುರಿದು ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ನ ಚೈನ್‌ಲಿಂಕ್ ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್ ನೀರನ್ನ ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನ ನೋಡೋದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಿಂದ ಹೊರಟಿದ್ದು, ನೀರಿನ ಹೊರಹರಿವಿನ ಪ್ರಮಾಣವನ್ನ 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ್ರೆ ಬಳಿಕ ತುಂಡಾದ ಚೈನ್‌ಲಿಂಕ್ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3-4 ದಿನವಾದ್ರೂ ಬೇಕು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರಡು ವರ್ಷಗಳ ಬಳಿಕ ಆಣೆಕಟ್ಟು ಭರ್ತಿಯಾಗಿರುವ ಕಾರಣ ವಾರಾಂತ್ಯದ ದಿನಗಳಲ್ಲಿ ತಂಡೋಪ ತಂಡವಾಗಿ ಜನ ಪ್ರತಿವಾರವೂ ಬರುತ್ತಿದ್ದರು. ಸೆಲ್ಪಿ ತೆಗೆದುಕೊಂಡು ಖುಷಿಪಡುತ್ತಿದ್ದರು. ಆದ್ದರಿಂದ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸೇತುವೆ ಮೇಲೆ ಅತಿ ಗಣ್ಯವ್ಯಕ್ತಿಗಳು ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ನಿರ್ಬಂಧ ಹೇರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



