ರಾಜ್ಯ

ಮಂಡ್ಯ: ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸಮಸ್ತ ಅನ್ನದಾತರಿಗೆ ಹೆಗಲು ಕೊಡುವ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಮಂಡ್ಯ: ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ಭತ್ತ ನಾಟಿ ಮಾಡಿದ ಎಚ್ ಡಿ ಕುಮಾರಸ್ವಾಮಿ
Published On :

ಮಂಡ್ಯ: ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಂದು ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು.

ಈ ಕುರಿತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭೂಮಿ ತಾಯಿ ಮಕ್ಕಳಾದ ನಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು. ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು.ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ನನ್ನಲ್ಲಿ ಧನ್ಯತೆಯ ಭಾವ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸಮಸ್ತ ಅನ್ನದಾತರಿಗೆ ಹೆಗಲು ಕೊಡುವ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.