ರಾಜ್ಯ

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂ ಸವಾರಿ: ಆಗಸ್ಟ್ 21ಕ್ಕೆ ಗಜಪಡೆ ಪ್ರಯಾಣ ಆರಂಭ!

ಮೈಸೂರು ದಸರಾ ಉತ್ಸವ ಅಕ್ಟೋಬರ್​ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂ ಸವಾರಿ: ಆಗಸ್ಟ್ 21ಕ್ಕೆ ಗಜಪಡೆ ಪ್ರಯಾಣ ಆರಂಭ!
ಅಭಿಮನ್ಯು ಆನೆ
Published On :

ಮೈಸೂರು: ಮೈಸೂರು ದಸರಾ ಉತ್ಸವ ಅಕ್ಟೋಬರ್​ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.

ಅಭಿಮನ್ಯು ಜೊತೆ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ 13 ಗಂಡು ಮತ್ತು 05 ಹೆಣ್ಣು ಆನೆ ಸೇರಿದೆ. ಜಂಬೂ ಸವಾರಿಯಲ್ಲಿ ಅಭಿಮನ್ಯು ಜೊತೆ 13 ಆನೆ ಭಾಗಿ ಆಗಲಿವೆ.

ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ. ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ ಮೈಸೂರಿಗೆ ಆಗಮಿಸಲಿದೆ.

ಇನ್ನು ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ ಮೀಸಲು ಆನೆಗಳಾಗಿವೆ. ದಸರಾ ಮಹೋತ್ಸವಕ್ಕೂ 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.