ಪ್ರಯಾಣಿಕರ ಗಮನಕ್ಕೆ: 13, 14, 15 ರಂದು ನಮ್ಮ ಮೆಟ್ರೋ ಹಸಿರು ಮಾರ್ಗ ಸಂಚಾರದಲ್ಲಿ ವ್ಯತ್ಯಯ!
ನಮ್ಮ ಮೆಟ್ರೋದ ಹಸಿರು ಮಾರ್ಗದ ರೈಲು ಸಂಚಾರದಲ್ಲಿ 13, 14, 15ರಂದು ಭಾರೀ ವ್ಯತ್ಯಯವಾಗಲಿದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಬೆಂಗಳೂರು: ನಮ್ಮ ಮೆಟ್ರೋದ ಹಸಿರು ಮಾರ್ಗದ ರೈಲು ಸಂಚಾರದಲ್ಲಿ 13, 14, 15ರಂದು ಭಾರೀ ವ್ಯತ್ಯಯವಾಗಲಿದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್ ಹಿನ್ನೆಲೆಯಲ್ಲಿ ಆಗಸ್ಟ್ 13ರಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಈ ಮಾರ್ಗದಲ್ಲಿ ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.
ಆಗಸ್ಟ್ 14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು, ಬೆಳಿಗ್ಗೆ 5ರ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಇನ್ನು ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 13 ಮತ್ತು 14 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆಗಸ್ಟ್ 14 ಮತ್ತು 15ರಂದು ಬೆಳಿಗ್ಗೆ 5 ಗಂಟೆಗೆ ಸಂಚಾರ ಪ್ರಾರಂಭವಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



