ಉತ್ತಮ ಮುಂಗಾರು ಮಳೆಯ ಹೊರತಾಗಿಯೂ ರಾಜ್ಯದಲ್ಲಿ ತಾಪಮಾನ ಹೆಚ್ಚಳ!
ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ 1.4 ಡಿಗ್ರಿ ಸೆಲ್ಸಿಯಸ್ ಹೆಚ್ಚು.

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇದರ ಹೊರತಾಗಿಯೂ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ಗಗನಕ್ಕೇರುತ್ತಿದೆ.
ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ 1.4 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಆಗಸ್ಟ್ 14 ರಂದು, ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಸಾಮಾನ್ಯಕ್ಕಿಂತ 2.8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ಬುಧವಾರ ಮತ್ತು ಗುರುವಾರ ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 2.4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ಈ ತಿಂಗಳ ಹವಾಮಾನ ಪರಿಸ್ಥಿತಿಗಳು ಮೇ ತಿಂಗಳಿನಂತೆಯೇ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಬೆಂಗಳೂರು) ನಿರ್ದೇಶಕ ಎನ್ ಪುವಿಯರಸನ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
“ಸೂರ್ಯನ ಪ್ರಖರ ಶಾಖವನ್ನು ಈ ತಿಂಗಳು ನಾವು ಗಮನಿಸಬಹುದು. ಗಾಳಿ, ಮೋಡ ಕಡಿಮೆಯಾಗಿದ್ದು ಆಕಾಶವು ಶುಭ್ರವಾಗಿ ಕಾಣಿಸುತ್ತಿದೆ. ತೇವಾಂಶ ಕೂಡ ಹೆಚ್ಚಾಗಿದೆ. ಆಗಸ್ಟ್ನಲ್ಲಿ ಮಳೆಯ ಪ್ರಮಾಣವೂ ಇಳಿಮುಖವಾಗಿದ್ದು, ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇನ್ನೂ ಮೂರು ದಿನಗಳ ಕಾಲ ಇದೇ ರೀತಿಯ ತಾಪಮಾನ ಇರಲಿದೆ. ನಂತರ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಪುವಿಯರಸನ್ ಅವರು ತಿಳಿಸಿದ್ದಾರೆ.
ಹಾವೇರಿಯಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ 6.6 ಡಿಗ್ರಿ ಸೆಲ್ಸಿಯಸ್‌ನಷ್ಟು ವ್ಯತ್ಯಾಸ ದಾಖಲಾಗಿದೆ. ಇದು ರಾಜ್ಯದಲ್ಲಿಯೇ ಅತಿ ಹೆಚ್ಚು ವ್ಯತ್ಯಾಸವಾಗಿತ್ತು. ಹಾವೇರಿಯಲ್ಲಿ ಗರಿಷ್ಠ ತಾಪಮಾನ 33.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.
IMD ಅಂಕಿಅಂಶಗಳ ಪ್ರಕಾರ, ಜೂನ್ 1 ರಿಂದ(ಮಾನ್ಸೂನ್ ಆರಂಭ) ಆಗಸ್ಟ್ 15 ರವರೆಗೆ, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಶೇ. 22 ರಷ್ಟು ಏರಿಕೆ ದಾಖಲಿಸಿದೆ. ರಾಜ್ಯದಲ್ಲಿ 573.4 ಮಿಮೀ ವಾಡಿಕೆಯ ಮಳೆಯ ಮುನ್ಸೂಚನೆಗೆ ವಿರುದ್ಧವಾಗಿ, 697.3 ಮಿಮೀ ಮಳೆಯಾಗಿದೆ. ಜೂನ್ ಮತ್ತು ಜುಲೈನಲ್ಲಿ ಗರಿಷ್ಠ ಪ್ರಮಾಣದ ಮಳೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಪ್ರಮಾಣ ಶೇ. 37ರಷ್ಟು ಏರಿಕೆಯಾಗಿದೆ. ಜೂನ್ 1 ರಿಂದ ಆಗಸ್ಟ್ 15 ರವರೆಗೆ ನಗರದಲ್ಲಿ 287.8 ಮಿಮೀ ಮಳೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



