ಮೈಸೂರು: ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರ ಗುರು ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೈಸೂರು: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರ ಗುರು ಅವರು ಶನಿವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ 7.30 ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಮಹೇಶ್ ಚಂದ್ರ ಗುರು ಅವರು 2019 ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.
ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು. ನಾಡ ಹಬ್ಬ ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಇವರ ಪಾತ್ರ ಪ್ರಮುಖವಾದದ್ದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



