ರಾಜ್ಯ

'ಗೃಹಲಕ್ಷ್ಮಿ ಯೋಜನೆ': ಹಬ್ಬದ ದಿನ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಮಹಿಳೆಯರು... ವಿಡಿಯೊ ನೋಡಿ...

ಮನೆಯ ಯಜಮಾನಿ ಹೆಸರಿನಲ್ಲಿ ತಿಂಗಳಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆಯಿಂದ ಹಲವು ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ.

'ಗೃಹಲಕ್ಷ್ಮಿ ಯೋಜನೆ': ಹಬ್ಬದ ದಿನ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಮಹಿಳೆಯರು... ವಿಡಿಯೊ ನೋಡಿ...
Published On :

ಮುಂಡಗೋಡು(ಉತ್ತರ ಕನ್ನಡ): ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಗೃಹಲಕ್ಷ್ನಿ ಯೋಜನೆ. ಮನೆಯ ಯಜಮಾನಿ ಹೆಸರಿನಲ್ಲಿ ತಿಂಗಳಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆಯಿಂದ ಹಲವು ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ.

ಈ ಯೋಜನೆಯಿಂದ ಖುಷಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಬಳಿಯ ಮಹಿಳೆಯರು ಮೊನ್ನೆ ವರಮಹಾಲಕ್ಷ್ಮಿ ಹಬ್ಬದ ದಿನ ಸಿಎಂ ಸಿದ್ದರಾಮಯ್ಯನವರ ಕುರಿತು ಹಾಡು ಕಟ್ಟಿ ಸಂಭ್ರಮಿಸಿದ್ದಾರೆ. ಸಿದ್ದರಾಮಯ್ಯನವರು ಕೊಡುತ್ತಿರುವ 2 ಸಾವಿರ ರೂಪಾಯಿಯಿಂದ ನಾವು ಖುಷಿಯಿಂದ ಹಬ್ಬ ಆಚರಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತನಾಡಿದ್ದ ಅವರು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಒಂದೇ ಸಾರಿ 4,000 ರೂಪಾಯಿ ಜಮೆ ಆಗುತ್ತದೆ. ಈಗಾಗಲೇ 26.65 ಲಕ್ಷ ರೂ. ಬಿಡುಗಡೆ ಆಗಿದೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.